ಶನಿವಾರ, 24 ಅಕ್ಟೋಬರ್ 2026

ಡಿಸಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ

ಪ್ರಕರಣದ ವಿಚಾರಣೆಗೆ ರವಿಕುಮಾರ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ವಿಚಾರಣೆಗೆ ಗೈರಾಗಿದ್ದ ಕಾರಣ ನ್ಯಾಯಾಲಯ ₹500 ದಂಡ ವಿಧಿಸಿತು. ಬಳಿಕ ₹1 ಲಕ್ಷ ವೈಯಕ್ತಿಕ ಬಾಂಡ್ ಹಾಗೂ ₹10 ಸಾವಿರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಲಾಯಿತು.

ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ದ್ವೇಷ ಭಾಷಣ, ಪ್ರಚೋದನಕಾರಿ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.

ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ

ಜಿಲ್ಲಾಧಿಕಾರಿ ವಿರುದ್ಧ ಹೇಳಿಕೆಯಿಂದ ವಿವಾದ :

2025ರ ಮೇ 24ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ರವಿಕುಮಾರ್, ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ಅವರ ಕಾರ್ಯವೈಖರಿ ಕುರಿತು ಆರೋಪಗಳನ್ನು ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿ ಬಗ್ಗೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ

ಹೇಳಿಕೆಗೆ ವಿರೋಧ ವ್ಯಕ್ತವಾದ ಬಳಿಕ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದ ಅವರು ಕ್ಷಮೆಯಾಚಿಸಿದ್ದರು.

ಇದೀಗ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆ ಮುಂದುವರಿಯಲಿದೆ.