ಭಾನುವಾರ, 25 ಅಕ್ಟೋಬರ್ 2026
Trending

ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ-ನೋಂದಣಿ ಪ್ರಕ್ರಿಯೆ ಆರಂಭ

Kambala

ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ʼಕಂಬಳʼವನ್ನು ಆಯೋಜನೆ ಮಾಡಲಾಗಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಕೋಣಗಳ ಮಾಲೀಕರು ಮತ್ತು ಕಂಬಳ ವೀರರಿಂದ ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.

Sponsored

ಮೈಸೂರಿನ ಸಾತಗಳ್ಳಿ ಹೊರವರ್ತುಲ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ ಕೇಂದ್ರದ ಬಳಿ ಕಂಬಳಕ್ಕಾಗಿ ಬೃಹತ್‌ ಕೆರೆಯನ್ನು ಸಿದ್ಧಪಡಿಸಲಾಗುತ್ತಿದೆ.

ಅರ್ಜಿ ಸಲ್ಲಿಸುವ ವಿಧಾನ: ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ಕೋಣಗಳ ಮಾಲೀಕರು ಮತ್ತು ಜಾನಪದ ಕ್ರೀಡಾಪಟುಗಳು ವಿವಿಧ ವಿಭಾಗಗಳಡಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ವಿವರ ಇಲ್ಲಿದೆ.

https://mysoredasara.gov.in ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಹೆಸರು ನೋಂದಾಯಿಸಬಹುದು.
ಇನ್ನೊಂದು, ನೇರವಾಗಿ ಅರ್ಜಿ ಪಡೆದು ಸಲ್ಲಿಸಲು ಬಯಸುವವರು ಮೈಸೂರಿನ ಜಿಲ್ಲಾ ಪಂಚಾಯತ್‌ ಕಚೇರಿಯ ಅಧಿಕೃತ ಪ್ರಾಧಿಕಾರದಿಂದ ಅರ್ಜಿಗಳನ್ನು ಪಡೆದು ನೋಂದಣಿ ಮಾಡಿಕೊಳ್ಳಬಹುದು.