Home News Siddaramaiah: ಕನ್ನಡ, ಕನ್ನಡಿಗರನ್ನು ಅಪ್ಪಿ ತಪ್ಪಿಯೂ ನಿಂದಿಸದಿರಿ! ಶಿಕ್ಷೆ ತಪ್ಪಿದ್ದಲ್ಲ!

Siddaramaiah: ಕನ್ನಡ, ಕನ್ನಡಿಗರನ್ನು ಅಪ್ಪಿ ತಪ್ಪಿಯೂ ನಿಂದಿಸದಿರಿ! ಶಿಕ್ಷೆ ತಪ್ಪಿದ್ದಲ್ಲ!

Hindu neighbor gifts plot of land

Hindu neighbour gifts land to Muslim journalist

Siddaramaiah: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಈ ಹಿನ್ನಲೆ,ಒಂದು ವೇಳೆ, ಇನ್ನೂ ಮುಂದೆ ಯಾರಾದರೂ ಕನ್ನಡ ಭಾಷೆ ಮತ್ತು ಕನ್ನಡಿಗರನ್ನು ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ. ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. 

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ಮಾತನಾಡಿದರು.

ಒಟ್ಟಿನಲ್ಲಿ ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರು ಇರಲಿ ಕರ್ನಾಟಕದಲ್ಲಿ ಇರುವವರೆಲ್ಲ ಕನ್ನಡಿಗರೇ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಶಾಸ್ತ್ರೀಯ ಭಾಷೆ. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಬೇರೆ ಭಾಷೆ ಕಲಿಯಿರಿ, ಆದರೆ ಕನ್ನಡ ಮರೆಯಬೇಡಿ ಎಂದು ಹೇಳಿದರು.