

Bengaluru: ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶ ಎಂದಾಗ ನೆನಪಾಗುವ ಹೆಸರು ಅಲೋಕ್ ಮೋಹನ್ ಹಾಗೂ ಇವರು ಕಳೆದ ಏಪ್ರಿಲ್ 30 ರಂದೆ ನಿವೃತ್ತಿಯಾಗಿದ್ದು, ಅವರ ಅವಧಿಯನ್ನು ಮೇ 21 ರವರೆಗೆ ವಿಸ್ತರಿಸಲಾಗಿತ್ತು.
ಇದೀಗ ಆ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾದಂತಹ ಬೆಂಗಳೂರಿನ ಚಿಕ್ಕಬಾಣಾವರ ಮೂಲದ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದ್ದು, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.
1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಮತ್ತು 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದಂತಹ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಕೂಡ ಪಡೆದುಕೊಂಡಿರುತ್ತಾರೆರುತ್ತಾರೆ.













