

ಬೆಂಗಳೂರು: ಗುಟ್ಕಾ ಜಾಹೀರಾತುಗಳ ವಿರುದ್ಧ ಕನ್ನಡಗರು ಸಿಡಿದೆದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನು ಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸಿದಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹೀರಾತುಗಳನ್ನು ಕಿತ್ತೆಸಿದಿದ್ದಾರೆ.
ಈ ತಂಬಾಕು ಜಾಹೀರಾತಿನ ಕಿಚ್ಚು ಉತ್ತರ ಕರ್ನಾಟಕದಲ್ಲಿ ಆರಂಭವಾಗಿತ್ತು. ಇದೀಗ ಇದು ಬೆಂಗಳೂರಿಗೆ ಬಂದಿದೆ. ಮೆಜೆಸ್ಟಿಕ್, ಕೆ.ಆರ್ ಪುರಂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಹರಿದು ಹಾಕಿದ್ದಾರೆ. ಆರ್ ಎಂಡಿ ಸೇರಿ ತಂಬಾಕು ಉತ್ಪನ್ನಗಳ ಜಾಹೀರಾತು ಪೋಸ್ಟರ್‌ಗಳನ್ನು ಸಾರಿಗೆ ಬಸ್‌ಗಳ ಮೇಲೆ ಅಂಟಿಸಿರುವುದನ್ನು ಕನ್ನಡ ಸಂಘಟನೆಗಳು ವಿರೋಧ ಮಾಡಿ ಇದೀಗ ಕಿತ್ತೆಸೆಯುತ್ತಿದ್ದಾರೆ.
ರೂಪೇಶ್ ರಾಜಣ್ಣ ಅವರ ನೇತೃತ್ವದ ಯುವ ಕರ್ನಾಟಕ ತಂಡದ ಕಾರ್ಯಕರ್ತರು ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ಪೋಸ್ಟರ್ ಸ್ಟಿಕ್ಕರ್‌ಗಳನ್ನು ತೆರವು ಮಾಡಿದ್ದಾರೆ.













