ಸೋಮವಾರ, 26 ಅಕ್ಟೋಬರ್ 2026
Trending

ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್: ಪದಕ ವಿಜೇತರಿಗೆ ₹15 ಲಕ್ಷ ಬಹುಮಾನ : ಸಚಿವ ಡಾ. ಜಿ. ಪರಮೇಶ್ವರ್

G Parameshwar
Image source: India today

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ₹15 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಡಿಸಿಎಂ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

Sponsored

ಇಮ್ರಾನ್ ಹಶ್ಮಿಗೆ H1N1 ಸೋಂಕು? ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ

ಇದರ ಜೊತೆಗೆ ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ. ರಾಜ್ಯದ 32 ಕ್ರೀಡಾಂಗಣಗಳನ್ನು ₹36 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.2ರಷ್ಟು ಕ್ರೀಡಾ ಮೀಸಲಾತಿಯನ್ನೂ ಜಾರಿಗೊಳಿಸಲಾಗಿದೆ.