ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ನೇರ ಬೆಂಬಲ ನೀಡದಿರಲು ನಿರ್ಧರಿಸಿದೆ.
ಮಕ್ಕಳ ಹಿತದೃಷ್ಟಿಯಿಂದ ಬಂದ್‌ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವ ಕ್ಯಾಮ್ಸ್, ನೈತಿಕ ಬೆಂಬಲ ಮಾತ್ರ ನೀಡುವುದಾಗಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಬೆಂಗಳೂರಿನ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸ್ಪಷ್ಟಪಡಿಸಿದೆ.
ಬಂದ್‌ಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಶಿಕ್ಷಕರು ಹಾಗೂ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಬೆಂಗಳೂರು : ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ




