

Karnataka Budget 2025-26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ದುಡಿಯುವ ಕೈಗಳಿಗೆ ವೃತ್ತಿ ತೆರಿಗೆಯನ್ನು 200 ರೂಪಾಯಿಂದ 300 ರೂಪಾಯಿಗೆ ಏರಿಕೆ ಮಾಡಿದ್ದಾರೆ.
ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳ ವೃತ್ತಿ ತೆರಿಗೆಯನ್ನು 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.













