ಸೋಮವಾರ, 26 ಅಕ್ಟೋಬರ್ 2026
Trending

ಕರ್ನಾಟಕ ಬಜೆಟ್‌: 15000 ಶಿಕ್ಷಕರ ನೇಮಕ, 800 ಪಬ್ಲಿಕ್‌ ಶಾಲೆ ಸ್ಥಾಪನೆ

ಕರ್ನಾಟಕ ಬಜೆಟ್‌: 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವ ಕುರಿತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರ ಜೊತೆ ಮುಂದಿನ 3 ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ 800 ಪಬ್ಲಿಕ್ ಶಾಲೆಗಳ ನಿರ್ಮಾಣ. ಅಂಗನವಾಡಿ ಮಕ್ಕಳಿಗೆ ಚಟುವಟಿಕೆ ಪುಸ್ತಕ, 1-10ನೇ ತರಗತಿ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಮೌಲ್ಯ ಶಿಕ್ಷಣ ಪುಸ್ತಕ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

Sponsored

‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.

Advertisement

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.