ಸೋಮವಾರ, 26 ಅಕ್ಟೋಬರ್ 2026
Trending

ಕರ್ನಾಟಕ ಬಜೆಟ್‌: ಅಡಿಕೆ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ ಘೋಷಿಸಿದ ಸರಕಾರ

Arecanut

ಬೆಂಗಳೂರು: ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ಮಹತ್ವದ ಘೋಷಣೆಯನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟು ಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ.

Sponsored

ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Advertisement

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಜೊತೆಗೆ, ರಾಜ್ಯದ ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಹಂತ ಹಂತವಾಗಿ ಶೀತಲಗೃಹಗಳನ್ನು ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ.