Home News Karnataka Cabinet : ಸಿದ್ದು ಸರ್ಕಾರದ ಸಂಪುಟ ಪುನರ್ ರಚನೆ? ಈ ಎಂಟು ಮಂದಿ ಸಚಿವರಿಗೆ...

Karnataka Cabinet : ಸಿದ್ದು ಸರ್ಕಾರದ ಸಂಪುಟ ಪುನರ್ ರಚನೆ? ಈ ಎಂಟು ಮಂದಿ ಸಚಿವರಿಗೆ ಕೋಕ್?

Hindu neighbor gifts plot of land

Hindu neighbour gifts land to Muslim journalist

Karnataka Cabinet : ರಾಜ್ಯ ಸಚಿವ ಸಂಪುಟ ಪುನಾರಚನೆ ಆಗುತ್ತಾ? ಎಂಬ ಕುತೂಹಲದ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌(DK Shivkumar ) ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆ ಚರ್ಚೆಗೆ ಎಡೆಮಾಡಿಕೊಟ್ಟಿದೆ. “ಕೆಲವು ಮಂತ್ರಿಗಳಿಗೆ ಆ ಸಂದೇಶ ಕೊಡಲಾಗಿದೆ” ಎನ್ನುವ ಮೂಲಕ ಸಂಪುಟ ಪುನಾರಚನೆಯ(Karnataka Cabinet)ಮುನ್ಸೂಚನೆಯನ್ನು ಡಿಕೆಶಿ ನೀಡಿದ್ದಾರೆ. ಈ ಬೆನ್ನಲ್ಲೇ ಯಾವ ಸಚಿವರಿಗೆ ಕೋಕ್ ನೀಡಲಾಗುತ್ತೆ? ಹೊಸದಾಗಿ ಯಾರು ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂಬ ಕುತೂಹಲ ಹೆಚ್ಚಿದೆ.

ಸಂಪುಟ ಪುನರ್ ರಚನೆ ಆಗುತ್ತದೆ ಎಂಬ ವಿಚಾರ ಮುನ್ನಡೆಗೆ ಬರುತ್ತಿದ್ದಂತೆ ಸಾಕಷ್ಟು ಮಂದಿ ನಾ ಮುಂದು, ತಾ ಮುಂದು ಎಂದು ದುಂಬಾಲು ಬೀಳುತ್ತಿದ್ದಾರೆ. ವಿನಯ್ ಕುಲಕರ್ಣಿ, ಲಕ್ಷ್ಮಣ್ ಸವದಿ, ಕೆ.ವೈ.ನಂಜೇಗೌಡ, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಬೇಳೂರು ಗೋಪಾಲಕೃಷ್ಣ, ಅಜಯ್ಸಿಂಗ್, ವಿಜಯಾನಂದ ಕಾಶಪ್ಪನವರ್, ಬಂಗಾರಪೇಟೆ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಮಂದಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಲಾಬಿ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳುತ್ತಲೇ ಒಳಗೊಳಗೇ ಕೆಲವರು ಸ್ಥಾನ ಗಿಟ್ಟಿಸಲು ಲಾಬಿ ನಡೆಸಿದರೆ ಇನ್ನು ಕೆಲವರು ಸಚಿವ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.

ಮತ್ತೊಂದೆಡೆ ಆರೇಳು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು, ಕೆಲವರ ಖಾತೆಗಳ ಬದಲಾವಣೆ ಮಾಡಬೇಕು ಎಂಬ ಚರ್ಚೆಗಳಿವೆ. ಈ ಹಿಂದೆ ವಿವಾದಿತ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದವರು ಇಲಾಖೆಯ ಕಾರ್ಯ ನಿರ್ವಹಣೆಯಲ್ಲಿ ಕಳಪೆ ಪ್ರದರ್ಶನ ಮಾಡಿದವರು, ಸಂಕಷ್ಟ ಸಂದರ್ಭದಲ್ಲಿ ಪಕ್ಷ ಮತ್ತು ನಾಯಕತ್ವದ ಪರವಾಗಿ ನಿಲ್ಲದೇ ಇರುವವರನ್ನು ಸಂಪುಟದಿಂದ ಕೈಬಿಟ್ಟು ಕ್ರಿಯಾಶೀಲ ಹಾಗೂ ಯುವ ನಾಯಕತ್ವಕ್ಕೆ ಮಣೆ ಹಾಕುವ ಸಂಬಂಧ ಚರ್ಚೆಗಳಾಗುತ್ತಿವೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿದ್ದಾಗ್ಯೂ ಸೋಲು ಕಂಡಿರುವ ನಾಲ್ಕು ಕ್ಷೇತ್ರಗಳ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ. ಇದರಲ್ಲಿ ಕೆಲವರು ಅನಗತ್ಯವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿರುವುದು ಪಕ್ಷದ ವರಿಷ್ಠರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.