

Karnataka Congress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ. ದೇಶದ ಮೂಲೆ ಮೂಲೆಯಲ್ಲಿ ಜನರು ಸಂಭ್ರಮಾಚರಣೆ ನಡೆಯುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್ ಎಕ್ಸ್ ಖಾತೆಯಿಂದ ಮಾಡಲ್ಪಟ್ಟ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಕಾಂಗ್ರೆಸ್ ಖಾತೆಯಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಟ್ವೀಟ್ ಮಾಡಿದೆ. ಉಗ್ರರ ವಿರುದ್ಧ ಅಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಕಾಂಗ್ರೆಸ್‌ನ ಈ ಟ್ವೀಟ್‌ಗೆ ಜನರು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಜನರ ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟನ್ನು ಡಿಲೀಟ್ ಮಾಡಿದೆ. ನಂತರ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.













