Home News CM Siddaramiah : ಕರ್ನಾಟಕ ರೈತರ ಸಾಲ ಮನ್ನಾ ವಿಚಾರ – ಗುಡ್ ನ್ಯೂಸ್ ಕೊಟ್ಟ...

CM Siddaramiah : ಕರ್ನಾಟಕ ರೈತರ ಸಾಲ ಮನ್ನಾ ವಿಚಾರ – ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

Hindu neighbor gifts plot of land

Hindu neighbour gifts land to Muslim journalist

 

CM Siddaramiah : ರಾಜ್ಯದ ರೈತರು ಎದುರು ನೋಡುತ್ತಿದ್ದ ಸಾಲ ಮನ್ನ ವಿಚಾರವಾಗಿ ಇದೀಗ ನಾಡಿನ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ಅಲ್ಲದೆ ಸಹಕಾರ ಇಲಾಖೆ ಅನಿವಾರ್ಯ ಕಾರಣಗಳಿಂದ ನನ್ನ ಸುಪರ್ದಿಗೆ ಬಂದಿದೆ. ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿ ಕೊಂಡು ಬಂದಿದ್ದೇನೆ ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನುಬ ಲಗೊಳಿಸಬೇಕಿದೆ. ನಾನು ಶಾಸಕರಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ. ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

ಅಲ್ಲದೆ ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿ ಗಳಂಥ ವೃತ್ತಿಮೂಲ ಸಂಘಗಳನ್ನು ಸಬಲಗೊಳಿಸಬೇಕು. ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.