Home News Karnataka Government: ಬಿಜೆಪಿಯ ಭೂ ಸುಧಾರಣಾ ಕಾಯ್ದೆ ವಾಪಸ್ – ಕೃಷಿಕರಲ್ಲದವರು ಇನ್ಮುಂದೆ ಕೃಷಿ ಭೂಮಿ...

Karnataka Government: ಬಿಜೆಪಿಯ ಭೂ ಸುಧಾರಣಾ ಕಾಯ್ದೆ ವಾಪಸ್ – ಕೃಷಿಕರಲ್ಲದವರು ಇನ್ಮುಂದೆ ಕೃಷಿ ಭೂಮಿ ಖರೀದಿಸುವಂತಿಲ್ಲ, ಸಿದ್ದರಾಮಯ್ಯ ಘೋಷಣೆ!!

Karnataka Government

Hindu neighbor gifts plot of land

Hindu neighbour gifts land to Muslim journalist

Karnataka Government : ಬಿಜೆಪಿ(BJP) ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯಲಾಗುವುದು. ಹೀಗಾಗಿ ಇನ್ಮುಂದೆ ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸುವಂತಿಲ್ಲ. ಅಂತಹವರಿಗೆ ಕೃಷಿ ಭೂಮಿ ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು 22 ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಅಂದಹಾಗೆ 1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈ ವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು. ಜತೆಗೆ ಕೃಷಿಕರಲ್ಲದವರು ಖರೀದಿಸಬೇಕಾದರೆ ಆದಾಯ ಮಿತಿ ನಿಗದಿ ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ನಿಯಮಗಳಿಗೆ ತಿದ್ದುಪಡಿ ತಂದು ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಲಾಗಿತ್ತು. ಆದರೀಗ ಕಾಂಗ್ರೆಸ್ ಗೌರ್ಮೆಂಟ್ ಅದನ್ನು ಹಿಂಪಡೆಯಲು ಮುಂದಾಗಿದೆ.