Home Education ರಾಜ್ಯದ ಸರಕಾರಿ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ!!!

ರಾಜ್ಯದ ಸರಕಾರಿ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ!!!

Hindu neighbor gifts plot of land

Hindu neighbour gifts land to Muslim journalist

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ( Education Minister BC Nagesh ) ಅವರು, ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನೂತನವಾಗಿ ಶಾಲಾ ಶಿಕ್ಷಣ ಸಚಿವರ ಜಾಲತಾಣ (EM Web Portal) ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶವನ್ನು ಸಮರ್ಪಿಸಿದರು.

ಆ ಬಳಿಕ ಮಾತನಾಡಿದ ಅವರು, ‘ಶಾಲಾ ಶಿಕ್ಷಣ ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವ ನೂತನ ವೆಬ್ ಪೋರ್ಟಲ್ schooleducationminister.karnataka.gov.in ಅಭಿವೃದ್ಧಿಪಡಿಸಲಾಗಿದೆ. ಈ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಶಿಕ್ಷಣ ಇಲಾಖೆಯ ನೌಕರರು ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳು, ದೂರುಗಳು, ಸಲಹೆಗಳು, ಅಭಿಪ್ರಾಯಗಳನ್ನು ನೀಡಬಹುದಾಗಿದೆ. ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ಪರಿಹರಿಸುವುದು ಮತ್ತು ದೂರಿನ ಸ್ಥಿತಿ-ಗತಿಯನ್ನು ಆನ್‌ಲೈನ್ ಮೂಲಕವೇ ಟ್ರ್ಯಾಕ್ ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ’ ಎಂಬ ಮಾಹಿತಿಯನ್ನು ನೀಡಿದರು.

ಶಿಕ್ಷಕರು ತಾವು ಕುಳಿತ ಸ್ಥಳದಿಂದಲೇ ಅರ್ಜಿ ಸಲ್ಲಿಸುವ ಮೂಲಕ ಸೇವೆ ಈ ಕೆಳಗಿನ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಕಲ್ಯಾಣ ನಿಧಿ ಸೇವೆಗಳು ಆನ್‌ಲೈನ್ http://kstbfonline.karnataka.gov.in ನಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸದಸ್ಯತ್ವ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ವೈದ್ಯಕೀಯ ಪರಿಹಾರ ಧನಸಹಾಯ, ಶಿಕ್ಷಕರ ಮಕ್ಕಳಿಗೆ ಉನ್ನತ ವ್ಯಾಸಂಗ ಧನ ಸಹಾಯ ಸೇರಿದಂತೆ ಇನ್ನಿತರ ಸೇವೆಗಳನ್ನು ಶಿಕ್ಷಕರು ಪಡೆದುಕೊಳ್ಳ ಬಹುದು. ಅಷ್ಟು ಮಾತ್ರವಲ್ಲದೇ ಶಿಕ್ಷಕರು ಈ ಸೇವೆಗಳಿಗಾಗಿ ಬೆಂಗಳೂರಿಗೆ ಬರುವುದು ತಪ್ಪಲಿದೆ ಎಂದು ಸಚಿವರು ಮಾಹಿತಿ ನೀಡಿದರು.