ಭಾನುವಾರ, 25 ಅಕ್ಟೋಬರ್ 2026
Trending

‘ಲೋಕಾಯುಕ್ತವನ್ನು ಮುಚ್ಚಿಬಿಡಿ’ ಎಂದ ಕರ್ನಾಟಕ ಹೈಕೋರ್ಟ್

ಕರ್ನಾಟಕದಲ್ಲಿ ಭ್ರಷ್ಟರನ್ನು ಬೇಟೆಯಾಡುತ್ತಿರುವ ಲೋಕಾಯುಕ್ತವನ್ನು ಮುಚ್ಚಿಬಿಡಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Sponsored

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ತನಿಖೆ ನಡೆಸಲು ಅಗತ್ಯ ಅನುಮತಿ ನೀಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣ ದಾಖಲಿಸಲು ಲೋಕಾಯುಕ್ತ (Lokayukta ) ಸಂಸ್ಥೆಯೇ ಅನುಮತಿ ಕೇಳುತ್ತಿದ್ದರೂ ಇಷ್ಟೊಂದು ವಿರೋಧವೇಕೆ? ಹಾಗಿದ್ದರೆ ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿಬಿಡಿ ಎಂದು ಹೈಕೋರ್ಟ್ ಅತ್ಯಂತ ತೀವ್ರವಾಗಿ ಚಾಟಿ ಬೀಸಿದೆ.

ಇದೇ ವೇಳೆ, ವಿಚಾರಣೆ ವೇಳೆ ಸರ್ಕಾರಿ ವಕೀಲರು ಕಡತವು ಮುಖ್ಯಮಂತ್ರಿಗಳ ಕಚೇರಿಯಲ್ಲಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕಡತ ಏಕೆ ಮುಖ್ಯಮಂತ್ರಿಗಳ ಕಚೇರಿಯಲ್ಲಿದೆ ಎಂದು ಪ್ರಶ್ನಿಸಿ, ಆರೋಪಿ ಪ್ರಹ್ಲಾದ್ ಜೋಶಿ/ಕಮ್ಮಾರ್ ವಿರುದ್ಧ ತನಿಖೆಗೆ ಅನುಮತಿ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿತು.