Home News Rain Alert: ಎಚ್ಚರ, ಕರಾವಳಿಗರೇ, ಮತ್ತೆ ಅಬ್ಬರಿಸಲಿದ್ದಾನೆ ವರುಣ! ಯೆಲ್ಲೋ ಅಲರ್ಟ್‌ ಘೋಷಣೆ, ಈ ದಿನದಿಂದ!

Rain Alert: ಎಚ್ಚರ, ಕರಾವಳಿಗರೇ, ಮತ್ತೆ ಅಬ್ಬರಿಸಲಿದ್ದಾನೆ ವರುಣ! ಯೆಲ್ಲೋ ಅಲರ್ಟ್‌ ಘೋಷಣೆ, ಈ ದಿನದಿಂದ!

Rain Alert
Image credit: Mint

Hindu neighbor gifts plot of land

Hindu neighbour gifts land to Muslim journalist

Rain Alert: ಹಲವಾರು ದಿನಗಳಿಂದ ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ (Rain Alert) ನೀಡಿದೆ. ಇದೀಗ ಕರಾವಳಿಗರಿಗೆ ಎಚ್ಚರಿಕೆಯ ಸಂದೇಶ ಬಂದಿದೆ. ರಾಜ್ಯದಲ್ಲಿ ಮುಂಗಾರು ಮತ್ತೆ ಪ್ರಬಲವಾಗುತ್ತಿರುವ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 20ರಂದು ಯೆಲ್ಲೊ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 21 ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಭಾರೀ ಜೋರಾಗಿ ಆರ್ಭಟಿಸಲಿದೆ‌. ಉತ್ತರ ಒಳನಾಡಿನಲ್ಲಿ ಆ.19 ರಿಂದ ಆ.23 ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ 20 ರವರೆಗೆ ರಾಜ್ಯದಲ್ಲಿ ಮಳೆ ಕೊರತೆಯಾಗಲಿದೆ. ಆದರೆ ಮುಂದಿನ 5 ದಿನಗಳಲ್ಲಿ ಕರಾವಳಿ (karavali) ಜಿಲ್ಲೆಗಳಾದ ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು. ಇದೀಗ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ನೀಡಿದೆ.

ಇದನ್ನೂ ಓದಿ: Liqor Price: ಫ್ರೀ ಎಫೆಕ್ಟ್‌! ಮದ್ಯದ ಬೆಲೆ ಹೆಚ್ಚಳ ಹಿನ್ನೆಲೆ, ರಾಜ್ಯ ಸರಕಾರಕ್ಕೆ ಶಾಕ್‌ ನೀಡಿದ ಜನತೆ!