ಸೋಮವಾರ, 26 ಅಕ್ಟೋಬರ್ 2026
Trending

Karnataka Police: ರಾಜ್ಯಾದ್ಯಲ್ಲಿ ಇನ್ಮುಂದೆ ವಾಹನಗಳ ಹೆಡ್ಲೈಟ್ ಗೆ ಈ ಬಲ್ಬ್ ಬಳಸವಂತಿಲ್ಲ – ತಪ್ಪಿದರೆ ಕೇಸ್ ದಾಖಲು !!

Karnataka Police: ರಾಜ್ಯದಲ್ಲಿ ವಾಹನಗಳಿಗೆ ಹೆಡ್ಲೈಟ್ ಸಲುವಾಗಿ ಎಲ್‌ಇಡಿ ಬಲ್ಬ್(LED Bulb) ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ.

Karnataka Police

Karnataka Police: ರಾಜ್ಯದಲ್ಲಿ ವಾಹನಗಳಿಗೆ ಹೆಡ್ಲೈಟ್ ಸಲುವಾಗಿ ಎಲ್‌ಇಡಿ ಬಲ್ಬ್(LED Bulb) ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ಈ ನಿಯಮವನ್ನೇನಾದರೂ ಉಲ್ಲಂಸಿದರೆ ಜುಲೈ(July) ಯಿಂದ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ(Karnataka Police)ಎಚ್ಚರಿಕೆ ನೀಡಿದೆ.

Sponsored

ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ಬಲ್ಸ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ. ಪ್ರಮುಖವಾಗಿ ಭಾರಿ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದ್ದಾರೆ. ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರ ವಾಹನ ಸವಾರ, ಚಾಲಕರಿಗೆ ತೀವರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡುಬಂದಿದೆ.

ಜಿಯೋ ಗ್ರಾಹಕರಿಗೆ ಬಂಪರ್ ಆಫ‌ರ್!ಇಲ್ಲಿದೆ 4 ರೀತಿಯ ನ್ಯೂ ರಿಚಾರ್ಜ್ ಪ್ಲಾನ್!

ಆದರಿಂದ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು. ಇಲ್ಲವಾದರೆ ಸವಾರ, ಚಾಲಕರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್(Alok Kumar) ಎಚ್ಚರಿಕೆ ನೀಡಿದ್ದಾರೆ.

ಇಷ್ಟೇ ಅಲ್ಲದೆ ಜುಲೈ ತಿಂಗಳಿಂದ ಈ ಬಗ್ಗೆ ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ. ಸಿಕ್ಕಿಬಿದ್ದರೆ ಮುಲಾಜಿಲ್ಲದೆ ಕೇಸ್ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಜೊತೆಗೆ ಎಲ್‌ಇಡಿ ಬಲ್ಪ್ ಅಳವಡಿಸಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಜುಲೈ 31ಕ್ಕೆ ವರದಿ ಒಪ್ಪಿಸುವಂತೆ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬ್ಯಾಂಕ್ ಖಾತೆಗೆ ನಿಮ್ಮ ಮೊಬೈಲ್ ಸಂಖ್ಯೆ ಲಿಂಕ್ ಆಗಿದೆಯೇ? ಹಾಗಿದ್ದರೆ ಈ ಮಾಹಿತಿ ತಿಳಿಯಿರಿ!