Home News Rain Alert: ಚಳಿಯಲ್ಲೂ ಮಳೆಯ ಆರ್ಭಟ- ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರೀ...

Rain Alert: ಚಳಿಯಲ್ಲೂ ಮಳೆಯ ಆರ್ಭಟ- ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

Hindu neighbor gifts plot of land

Hindu neighbour gifts land to Muslim journalist

Karnataka Rain: ರಾಜ್ಯದಲ್ಲಿ ಚುಮು ಚುಮು ಚಳಿಯ ನಡುವೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದರ ನಡುವೆ, ರಾಜಧಾನಿ ಬೆಂಗಳೂರು ಒಳಗೊಂಡಂತೆ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ವರುಣ ದರ್ಶನ (Karnataka Rain)ನೀಡುವ ಕುರಿತು ಹವಾಮಾನ ಇಲಾಖೆ (IMD)ಮಾಹಿತಿ ನೀಡಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ(Rain Alert)ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಅದೇ ರೀತಿ ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಲಘು ಮಳೆಯಾಗಲಿದೆ.

 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರದಲ್ಲಿ ತುಂತುರು ಮಳೆಯಾಗಲಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.