# Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ

- Link: https://hosakannada.com/news/karnataka-weather-forecast-monsoon-likely-to-weaken-by-end-of-june/
- Published: 2025-06-23T13:59:36+00:00
- Author: ಹೊಸಕನ್ನಡ ನ್ಯೂಸ್

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ
ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಜೂನ್ 28ರ ತನಕ ಸಾಮಾನ್ಯ
ಮಳೆ ಮುಂದುವರಿಯುವ ಲಕ್ಷಣಗಳಿದ್ದು, 29ರಿಂದ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

Sponsored

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ
ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.

Advertisement

Advertisement

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು
ಅವಕಾಶ ಸಿಗಬಹುದು.

 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, 
ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ
ಮೋಡದ ವಾತಾವರಣ ಇರಬಹುದು.

ಈಗಿನಂತೆ ಜೂನ್ 25ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ
ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

 

 

[ಇದನ್ನೂ ಓದಿ: UP: ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದ 13ರ ಬಾಲಕನನ್ನು ಹೊತ್ತೊಯ್ದ ಮೊಸಳೆ !!](https://hosakannada.com/2025/06/23/crocodile-carries-away-13-year-old-boy-who-was-bathing-buffalo-in-river/)

Advertisement
