ಶನಿವಾರ, 24 ಅಕ್ಟೋಬರ್ 2026

ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

Monsoon Rain

ಕರ್ನಾಟಕದಲ್ಲಿ ಮಳೆ ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಅನುಸಾರ, ಜುಲೈ 28,29 ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ಉತ್ತರಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಭಾರೀ ಮಳೆ ನಿರೀಕ್ಷೆ ಇದೆ. ದಕ್ಷಿಣ ಕನ್ನಡದಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.