Home News Karnataka: ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ!

Karnataka: ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ!

Hindu neighbor gifts plot of land

Hindu neighbour gifts land to Muslim journalist

Karnataka: ಕರ್ನಾಟಕ (Karnataka) ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2024ರಿಂದ 31.12.2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ 2025ರ ಜುಲೈ 10 ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ವೆಬ್‍ಸೈಟ್ www.karanatakayakshaganaacademy.co.in ಮತ್ತು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ:080-22113146) ಪಡೆಯಬಹುದು ಹಾಗೂ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.