Home News ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಣ; ಕೇರಳ ಆದೇಶ

ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಣ; ಕೇರಳ ಆದೇಶ

Hindu neighbor gifts plot of land

Hindu neighbour gifts land to Muslim journalist

Mangaluru: ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಕೇರಳ ಸರಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿರುವ ಕುರಿತು ವರದಿಯಾಗಿದೆ.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಸದಸ್ಯ ಎ.ಆರ್.ಸುಬ್ಬಯ್ಯ ಕಟ್ಟೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಕಾಸರಗೋಡಿನಲ್ಲಿ ಎಲ್ಲ ಗುರುತಿನ ಚೀಟಿಗಳು ಮಲಯಾಳಂ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿದ್ದು, ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಪರಿಗಣಿಸಿ, ರೇಶನ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆ ಅಳವಡಿಸುವಂತೆ ಕೋರಲಾಗಿತ್ತು.

ಅದರಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಾರ್ಯದರ್ಶಿ ಅವರು ತಮ್ಮ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.