ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
SponsoredZ-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು.
Marriage AdSponsoredಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದೆ. ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ. ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್ ಅವರು ಆಗಮಿಸಿದ್ದ ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.




