Home News ಸೋಷಿಯಲ್‌ ಮೀಡಿಯಾ ಸ್ಟಾರ್‌ ಕಿರಿಕ್‌ ಕೀರ್ತಿ ಸಾಯುವ ನಿರ್ಧಾರ ಪೋಸ್ಟ್‌ ವೈರಲ್‌ ! ಏನಿದು ಆತಂಕಕಾರಿ...

ಸೋಷಿಯಲ್‌ ಮೀಡಿಯಾ ಸ್ಟಾರ್‌ ಕಿರಿಕ್‌ ಕೀರ್ತಿ ಸಾಯುವ ನಿರ್ಧಾರ ಪೋಸ್ಟ್‌ ವೈರಲ್‌ ! ಏನಿದು ಆತಂಕಕಾರಿ ಪೋಸ್ಟ್‌?

Hindu neighbor gifts plot of land

Hindu neighbour gifts land to Muslim journalist

ಕಿರಿಕ್‌ ಕೀರ್ತಿ ಯಾರಿಗೆ ತಾನೇ ಗೊತ್ತಿಲ್ಲ. ಹೇಳಿ, ಒಂದು ಕಾಲದಲ್ಲಿ ಸೋಶಿಯಲ್‌ ಮೀಡಿಯಾ ಸ್ಟಾರ್.‌ ಬಿಗ್‌ ಬಾಸ್‌ ಸ್ಪರ್ಧಿ. ತನ್ನ ಮಾತಿನಿಂದಲೇ ಎಲ್ಲರ ಮನ ಗೆದ್ದಿರುವ ಇವರು ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾನು ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ಮಾತನ್ನು ಬಹಿರಂಗ ಪಡಿಸಿದ್ದು, ಇದನ್ನು ಓದಿ ಕಿರಿಕ್‌ ಕೀರ್ತಿ ಅಭಿಮಾನಿಗಳು ಕಳವಳಗೊಂಡಿದ್ದರು. ಯಾವಾಗಲು ಚಟಪಟ ಅಂತ ಮಾತನಾಡಿ ಇನ್ನೊಬ್ಬರನ್ನು ಮಾತಿನಿಂದ ಮೋಡಿ ಮಾಡುತ್ತಿದ್ದ ಈ ಯುವಕ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬ ಮಾತನ್ನು ಕೂಡಾ ಅವರೇ ಸ್ಪಷ್ಟವಾಗಿ ತಿಳಿಸಿದ್ದಾರೆ. ಅದೇನು ಕಾರಣವೆಂದು ನಾವು ತಿಳಿದುಕೊಳ್ಳುವ ಬನ್ನಿ.

ಕಿರಿಕ್‌ ಕೀರ್ತಿ ಹೇಳುವ ಪ್ರಕಾರ, ಅವರ ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ ಹೋಗಿದ್ದಾಗಿಯೂ, ಅಷ್ಟು ಮಾತ್ರವಲ್ಲದೇ, ಜಿಹಾದಿಗಳ ಬೆದರಿಕೆ ಕರೆಗಳು ನನ್ನ ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಮಗನ ಜೊತೆಗಿರುವ ಫೋಟೋ ಶೇರ್ ಮಾಡಿ ಜಗತ್ತನ್ನು ಬಿಟ್ಟು ಹೋಗುವ ನಿರ್ಧಾರ ಮಾಡಿದ್ದೆ ಎಂದು ಹೇಳಿದ್ದಾರೆ.

“ನಿರ್ಧಾರ ಮಾಡಿಬಿಟ್ಟಿದ್ದೆ. ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ. ಕಾರಣಗಳು ಹಲವು. ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು. ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು. ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದ್ವು, ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ’ ಎಂದು ಬರೆದುಕೊಂಡಿದ್ದಾರೆ.

’10 ನಿಮಿಷ ಧ್ಯಾನ ಮಾಡ್ದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ‌ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಾಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಾಸ್ ತರುವ ತನಕ ಪ್ರಯತ್ನ‌ ನಿರಂತರ. ಇದು ಹೇಳಿಕೊಳ್ಳಬಾರದ ವಿಷಯ. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ’ ಎಂದು ಕಿರಿಕ್ ಕಾರ್ತಿ ತನ್ನ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಕಿರಿಕ್‌ ಕೀರ್ತಿ ಅವರು ತಾನು ಈ ನಿರ್ಧಾರ ತೆಗೆದುಕೊಳ್ಳಲು ನಿಜವಾದ ಕಾರಣವೇನು ಎಂಬುದನ್ನು ಹೇಳಿಲ್ಲ. ಅಲ್ಲದೆ ಕಮೆಂಟ್‌ ಸೆಕ್ಷನ್‌ ಅನ್ನು ಹೈಡ್‌ ಮಾಡಿದ್ದಾರೆ. ಇತ್ತೀಚೆಗೆ ಕಿರಿಕ್‌ ಕೀರ್ತಿ ಸಾಮಾಜಿಕ ಜಾಲತಾಣದಿಂದ ಕೂಡಾ ದೂರ ಆಗಿದ್ದು, ಎಲ್ಲೂ ಕಿರುತೆರೆ ಆಗಲಿ ಪ್ರೇಕ್ಷಕರ ಮುಂದಾಗಿ ಕಾಣಿಸಿಕೊಂಡಿದ್ದೇ ಕಡಿಮೆ ಎಂದು ಹೇಳಬಹುದು. ಈಗ ಅವರು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್‌ ಆಗಿದ್ದಕ್ಕೆ ಅವರ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಏನೇ ಆಗಲಿ ತನ್ನ ಮನಸ್ಸನ್ನು ತಹಬದಿಗೆ ಬಂದು ತನಗಾಗಿ, ಕುಟುಂಬಕ್ಕಾಗಿ ತನ್ನನ್ನು ಪ್ರೀತಿಸುವ ಅಭಿಮಾನಿಗಳಿಗಾಗಿ ಕಿರಿಕ್‌ ಕೀರ್ತಿ ಮತ್ತೆ ಮೊದಲಿನ ಹಾಗೆ ಆಗಿದ್ದು ಅತೀವ ಸಂತಸ ಕೊಟ್ಟಿದೆ ಎಂದರೆ ತಪ್ಪಾಗಲಾರದು.