ಕೊಕ್ಕಡ: ಸ್ನೇಹಿತರ ಜೊತೆ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅ.20 ರಂದು ಮಧ್ಯಾಹ್ನ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ನಡೆದಿದೆ.
Sponsoredಮೃತ ಯುವಕನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ ಗೌಡ ಅವರ ಪುತ್ರ ಕೀರ್ತನ್ (21) ಎಂದು ಗುರುತಿಸಲಾಗಿದೆ.
ಸ್ಥಳೀಯರು ಕೂಡಲೇ ಕಾರ್ಯಾಚರಣೆ ಮಾಡಿ ನೀರಿನಲ್ಲಿ ಮುಳುಗಿದ್ದ ಕೀರ್ತನ್ ನನ್ನು ಮೇಲಕ್ಕೆತ್ತಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕೀರ್ತನ್ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಡುತ್ತಿದ್ದು, ರಜೆಯ ಕಾರಣ ಊರಿಗೆ ಬಂದಿದ್ದರು ಎನ್ನಲಾಗಿದೆ.




