Home News Bharat Shetty: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ – ಆರೋಪಿಗಳ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ...

Bharat Shetty: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ – ಆರೋಪಿಗಳ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಭರತ್ ಶೆಟ್ಟಿ

Hindu neighbor gifts plot of land

Hindu neighbour gifts land to Muslim journalist

Bharat Shetty: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ನಡೆಸಿದ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್ (Firing)​ ಮಾಡಿದ್ದಾರೆ. ಈ ಪ್ರಕರಣದ ತನಿಖೆಯು ಚುರುಕಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಶಾಸಕ ಭರತ್ ಶೆಟ್ಟಿ ಅವರು ಸ್ಫೋಟಕ ಹೇಳಿಕೆ ಒಂದನ್ನು ನೀಡಿದ್ದಾರೆ.

ಹೌದು, ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಬಗ್ಗೆ ಮಾತನಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಅಚ್ಚರಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು ದರೋಡೆ ಪ್ರಕರಣದಲ್ಲಿ 100% ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ ಆದರೆ ಪ್ಲಾನಿಂಗ್ ಮಾಡಿದವರನ್ನು ಕುಮ್ಮಕ್ಕು ನೀಡೋರನ್ನು ಬಚಾವ್ ಮಾಡಲಾಗುತ್ತಿದೆ. ಆರೋಪಿಗಳನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ? ಸಚಿವರು ಆಗಬೇಕು, ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ರಾಜಕೀಯ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಅಲ್ಲದೆ ಈ ಪ್ರಕರಣ ದಲ್ಲಿ ಸ್ಥಳೀಯರ ಕೈವಾಡ ಇರುವ ಬಗ್ಗೆ ಮಾಹಿತಿ ಬಂದಿದೆ. ಹಿಂದೂ ಮುಖಂಡರ ಹತ್ಯೆ ಮಾಡಿದ ಆರೋಪಿಗಳೂ ಈ ಪ್ರಕರಣದ ಹಿಂದೆ ಇದ್ದಾರೆ. ಪೊಲೀಸರು ನಿಧಾನಗತಿಯ ತನಿಖೆಯನ್ನು ಮಾಡುತ್ತಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನ ಮುಚ್ಚಿ ಹಾಕೋ ಪ್ರಯತ್ನ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.