ಮಂಗಳವಾರ, 27 ಅಕ್ಟೋಬರ್ 2026
Trending

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ

ಬೆಳ್ತಂಗಡಿ, ಜು. 10: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Sponsored

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ  ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

Advertisement
Advertisement

ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು:

– ನಿಟ್ಟಡೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಿಟ್ಟಡೆ.

– ಕರಾಯ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕರಾಯ.

– ಬಂಗಾಡಿ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ–1.

– ಪುತ್ತಿಲ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಾರ್ಯ.

– ಬಂಗಾಡಿ– ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಾವೂರು.

– ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಯಲು.

– ನಿಡ್ಲೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ.

– ಗುರುವಾಯನಕೆರೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ.

– ಆಂಡಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ.

– ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ.

– ಮುಂಡಾಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಿಲ್ಲೂರು.

ಕರ್ನಾಟಕ ಸರ್ಕಾರದ ಈ ನಿರ್ಧಾರದಿಂದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಪಿಎಸ್ ಯೋಜನೆ ಮಹತ್ವದ ಹೆಜ್ಜೆಯಾಗಲಿ ಮತ್ತು ಕೆಪಿಎಸ್ ಶಾಲೆಗಳು ಮೇಲ್ದರ್ಜೆಗೆರಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

Advertisement