ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.\
ರಾಷ್ಟ್ರಪತಿ ಮುರ್ಮು ಅವರ ಎಡಿಸಿ ಮೇಜರ್ ರಿಷಭ್ ಸಿಂಗ್ ಭಾರತೀಯ ಸೇನೆಯಿಂದ ಸ್ವಯಂ ನಿವೃತ್ತಿ!!
ಬೆಂಗಳೂರಿನ ಕೋರಮಂಗಲದಲ್ಲಿರುವ ಎನ್ಜಿವಿ ನಿವಾಸದಲ್ಲಿ 1ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಜ್ಞಾನೇಂದ್ರ ಕುಮಾರ್ ಅವರನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
KPSC ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯ (ED) ಹಾಗೂ ಸಿಐಡಿ ಅಧಿಕಾರಿಗಳು KPSC ಕಚೇರಿಯಲ್ಲಿ ದಾಳಿ ನಡೆಸಿ ಹಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು.
ರಾಷ್ಟ್ರಪತಿ ಮುರ್ಮು ಅವರ ಎಡಿಸಿ ಮೇಜರ್ ರಿಷಭ್ ಸಿಂಗ್ ಭಾರತೀಯ ಸೇನೆಯಿಂದ ಸ್ವಯಂ ನಿವೃತ್ತಿ!!
ದಾಳಿ ನಡೆದ ಬಳಿಕ ಜ್ಞಾನೇಂದ್ರ ಕುಮಾರ್ ಕೆಲ ದಿನಗಳ ಕಾಲ ತನಿಖಾ ತಂಡದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಬಳಿಕ ಎರಡು ದಿನಗಳ ಹಿಂದೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಗಾಗಿದ್ದರು.
ವಿಚಾರಣೆ ವೇಳೆ ಲಭ್ಯವಾದ ಮಾಹಿತಿ ಹಾಗೂ ಸಾಕ್ಷ್ಯಗಳ ಆಧಾರದ ಮೇಲೆ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇದೀಗ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ನೇಮಕಾತಿ ಅಕ್ರಮದ ಹಿಂದೆ ಇನ್ನಷ್ಟು ಅಧಿಕಾರಿಗಳು ಅಥವಾ ಮಧ್ಯವರ್ತಿಗಳ ಪಾತ್ರವಿದೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.
ರಾಷ್ಟ್ರಪತಿ ಮುರ್ಮು ಅವರ ಎಡಿಸಿ ಮೇಜರ್ ರಿಷಭ್ ಸಿಂಗ್ ಭಾರತೀಯ ಸೇನೆಯಿಂದ ಸ್ವಯಂ ನಿವೃತ್ತಿ!!



