Home News KRS Dam: ಕೆಆರ್‌ಎಸ್ ಡ್ಯಾಂ ಭರ್ತಿ: ನದಿ ಪಾತ್ರದ ಜನರಿಗೆ ಅಲರ್ಟ್

KRS Dam: ಕೆಆರ್‌ಎಸ್ ಡ್ಯಾಂ ಭರ್ತಿ: ನದಿ ಪಾತ್ರದ ಜನರಿಗೆ ಅಲರ್ಟ್

Hindu neighbor gifts plot of land

Hindu neighbour gifts land to Muslim journalist

KRS Dam: ಮುಂಗಾರು ಮಳೆ ಬಳಿಕ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ (Cauvery River) ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ.

ಸದ್ಯ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್‌ನ್ನು ಸದ್ಯ ನದಿಗೆ ಬಿಡಲಾಗುತ್ತಿದೆ. 124.80 ಗರಿಷ್ಟ ಮಟ್ಟದ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ.