Home News Bantwala: ಓವರ್‌ಟೇಕ್‌ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ KSRTC ಬಸ್‌; ಸವಾರ ಸಾವು

Bantwala: ಓವರ್‌ಟೇಕ್‌ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ KSRTC ಬಸ್‌; ಸವಾರ ಸಾವು

Hindu neighbor gifts plot of land

Hindu neighbour gifts land to Muslim journalist

Bantwala: ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಓವರ್‌ಟೇಕ್‌ ಮಾಡುವ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಿನ್ನೆ (ಮೇ 18) ತಡರಾತ್ರಿ ನಡೆದಿದೆ.

ಅಲಿಸ್ಟರ್‌ ಡಿಸೋಜ (24) ಮೃತಪಟ್ಟ ವ್ಯಕ್ತಿ. ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಬೈಕಿನಲ್ಲಿ ಸ್ನೇಹಿತರ ಜೊತೆ ಮಂಗಳೂರಿಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೋ ಟ್ರಾವೆಲರನ್ನು ಓವರ್‌ಟೇಕ್‌ ಮಾಡಲು ಹೋಗಿ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.