Home News Deadly Accident: ಕೆಎಸ್‌ಆರ್‌ಟಿಸಿ ಬಸ್‌ ತಮಿಳುನಾಡಿನಲ್ಲಿ ಭೀಕರ ಅಪಘಾತ; ಕರ್ನಾಟಕದ ನಾಲ್ವರ ಸಾವು

Deadly Accident: ಕೆಎಸ್‌ಆರ್‌ಟಿಸಿ ಬಸ್‌ ತಮಿಳುನಾಡಿನಲ್ಲಿ ಭೀಕರ ಅಪಘಾತ; ಕರ್ನಾಟಕದ ನಾಲ್ವರ ಸಾವು

Hindu neighbor gifts plot of land

Hindu neighbour gifts land to Muslim journalist

Kolara: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಟ್ಯಾಂಕರ್-ಕೆಎಸ್‌ಆರ್‌ಟಿಸಿ ‌ನಡುವೆ ಭೀಕರ ಅಪಘಾತವೊಂದು ಆಗಿದ್ದು, ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ. ತಮಿಳುನಾಡಿನ ರಾಣಿಪೇಟೆ ಬಳಿ ಈ ಘಟನೆ ನಡೆದಿದೆ.

ಕೋಲಾರದ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಕ್ಯಾಂಟರ್‌ ಚಾಲಕ ಮಂಜುನಾಥ್‌, ಕ್ಲೀನರ್‌ ಶಂಕರ್‌, ಸಹಾಯಕ ಸೋಮಶೇಖರ್‌, ವೆಂಕಟೇಶ್‌ ನಗರ ಗ್ರಾಮದ ರೈತ ಕೃಷ್ಣಪ್ಪ ಸಾವಿಗೀಡಾದವರು.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಜನರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ತಮಿಳುನಾಡಿದ ಮೇಲ್ಮರವತ್ತೂರು ಓಂಶಕ್ತಿ ದೇವಾಲಯಕ್ಕೆ ಪ್ರವಾಸಕ್ಕೆಂದು ಹೋಗಿದ್ದು, ಪೂಜೆ ಮಾಡಿ ವಾಪಸು ಬರುತ್ತಿದ್ದರು.

ಕ್ಯಾಂಟರ್‌ನಲ್ಲಿ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ನಾಲ್ವರು, ತರಕಾರಿ ತುಂಬಿಕೊಂಡು ಚೆನ್ನೈಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ತಮಿಳುನಾಡಿನ ರಾಣಿಪೇಟೆ ಬಳಿ ಬರುತ್ತಿದ್ದಂತೆ ಎರಡು ವಾಹನದ ನಡುವೆ ಅಪಘಾತವಾಗಿದೆ. ಈ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಜೀವ ಬಿಟ್ಟಿದ್ದು, ಬಸ್‌ನಲ್ಲಿದ್ದವರು ಗಂಭಿರ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.