ಸೋಮವಾರ, 26 ಅಕ್ಟೋಬರ್ 2026
Trending

ಸುಬ್ರಹ್ಮಣ್ಯ : ಕೆಎಸ್‌ಎಸ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸರ್ಟಿಫಿಕೇಟ್ ಕೋರ್ಸ್‌ಗಳ ಬಗ್ಗೆ ತರಬೇತಿ

ಕಡಬ : ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನಲ್ಲಿ ಐಕ್ಯೂಎಸಿ , ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ವತಿಯಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಸರ್ಟಿಫಿಕೇಟ್ ಕೋರ್ಸುಗಳ ಕುರಿತು ತರಬೇತಿ ಕಾರ್ಯಕ್ರಮ ಸೆ.22ರಂದು ನಡೆಯಿತು.

Sponsored

ಅಭಿಲಾಷ್ ಕೆ. ಮ್ಯಾನೇಜಿಂಗ್ ಡೈರೆಕ್ಟರ್ ಆಫ್ ಅಭಿಜ್ಞ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

Advertisement
Advertisement

ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಉಪನ್ಯಾಸಕಿ ಡಾ. ನೀತು ಸುರೇಶ್ ನಿರೂಪಣೆಯೊಂದಿಗೆ ಸ್ವಾಗತಿಸಿದರು. ದ್ವಿತೀಯ ಬಿಕಾಂ ವಿಭಾಗದ ಕಾಂತಿ ಹಾಗೂ ಜ್ಯೋತಿ ಪ್ರಾರ್ಥಿಸಿದರು.

Advertisement