Home News Kumbhamela: ಮೈಸೂರಿನಲ್ಲಿ ಇಂದಿನಿಂದ ಕುಂಭಮೇಳ! ಈ ಮೇಳದ ವಿಶೇಷತೆ ಏನು ಗೊತ್ತಾ?!

Kumbhamela: ಮೈಸೂರಿನಲ್ಲಿ ಇಂದಿನಿಂದ ಕುಂಭಮೇಳ! ಈ ಮೇಳದ ವಿಶೇಷತೆ ಏನು ಗೊತ್ತಾ?!

Hindu neighbor gifts plot of land

Hindu neighbour gifts land to Muslim journalist

Kumbhamela: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಇತ್ತ ದಕ್ಷಿಣ ಭಾರತದ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T Narasipura) ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ (Kumbhamela) ನಡೆಯಲಿದೆ.

 

ಹೌದು, ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ಕುಂಭಮೇಳ ನಡೆಯಲಿದ್ದು, ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮುಖ್ಯವಾಗಿ ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದೆ.

 

ಇನ್ನು ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದ್ದು, ಅಂದು ಬೆಳಗ್ಗೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಈಗಾಗಲೇ ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.