Home News Lakshmi Hebbalkar : ‘ಗೃಹ ಲಕ್ಷ್ಮಿ’ ದುಡ್ಡಿನ ಬಗ್ಗೆ ಚಿಂತೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ...

Lakshmi Hebbalkar : ‘ಗೃಹ ಲಕ್ಷ್ಮಿ’ ದುಡ್ಡಿನ ಬಗ್ಗೆ ಚಿಂತೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

Hindu neighbor gifts plot of land

Hindu neighbour gifts land to Muslim journalist

Lakshmi Hebbalkar: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಕೆಲವು ಫಲಾನುಭವಿಗಳಿಗೆ 15ನೇ, 16ನೇ ಮತ್ತು 17ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ, ಇದರಿಂದಾಗಿ ಮಹಿಳೆಯರು ತೀವ್ರ ನಿರೀಕ್ಷೆಯಲ್ಲಿದ್ದಾರೆ. ಇದೀಗ ಪೆಂಡಿಂಗ್ ಇರುವ ಹಣ ಬಿಡುಗಡೆ ಪ್ರಕ್ರಿಯೆ ಆರಂಭಿಸಿದ್ದು, ಹಂತ ಹಂತವಾಗಿ ಎಲ್ಲಾ ಖಾತೆಗೆ (Bank Account) ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಾಗುತ್ತಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಹಣ ಮುಂದಿನ ತಿಂಗಳಿನಿಂದ ಸಕಾಲದಲ್ಲಿ ಬಿಡುಗಡೆ ಆಗಲಿದೆ. ೧೫ ದಿನಗಳ ಹಿಂದೆ ನಮ್ಮ ಇಲಾಖೆಗೆ ಹಣ ಬಂದಿದೆ. ಮಹಿಳೆಯರು ಯಾವುದೇ ಕಾರಣಕ್ಕೂ ಚಿಂತೆ ಮಾಡುವುದು ಬೇಡ. ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ . ಮುಂದಿನ ತಿಂಗಳು ಎಲ್ಲವು ಸರಿ ಹೋಗಲಿದೆ. ಈ ಹಿಂದಿನಂತೆಯೇ ಎಲ್ಲಾ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಖಾತೆಗೆ ಹಣ ಹಾಕಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಅಲ್ಲದೆ ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇವರರ ದಯೆಯಿಂದ ಸಂಪೂರ್ಣ ಗುಣಮುಖಳಾಗಿದ್ದೇನೆ. ವೈದ್ಯರು ಸುಮಾರು 6 ವಾರಗಳ ಕಾಲ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವ ವಿಶ್ವಾಸವಿದೆ ಎಂದಿದ್ದಾರೆ.