Home News Education: ಕಾಲೇಜು ವಿದ್ಯಾರ್ಥಿಗಳಿಗೆ ಹೊಡೀತ್ ಲಾಟ್ರಿ, ಇನ್ಮುಂದೆ 80 ಮಾರ್ಕಿಗೆ ಪರೀಕ್ಷೆ ಬರೆದರಾಯಿತು, ಸ್ಟೂಡೆಂಟ್ಸ್ ಗ್ಯಾರಂಟಿ...

Education: ಕಾಲೇಜು ವಿದ್ಯಾರ್ಥಿಗಳಿಗೆ ಹೊಡೀತ್ ಲಾಟ್ರಿ, ಇನ್ಮುಂದೆ 80 ಮಾರ್ಕಿಗೆ ಪರೀಕ್ಷೆ ಬರೆದರಾಯಿತು, ಸ್ಟೂಡೆಂಟ್ಸ್ ಗ್ಯಾರಂಟಿ ಭಾಗ್ಯ ತಕ್ಷಣದಿಂದ ಜಾರಿ

Education
Image source: Deccan herald

Hindu neighbor gifts plot of land

Hindu neighbour gifts land to Muslim journalist

Education: ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಾಲಾ ಶಿಕ್ಷಣ (Education) ಹಾಗೂ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa ) ಅವರು ಪ್ರಥಮ ಹಾಗೂ ದ್ವೀತೀಯ ಪಿಯುಸಿಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಹೌದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ ಆಂತರಿಕ 20 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಜೊತೆಗೆ ಭಾಷಾ ವಿಷಯಗಳು ಮತ್ತು ಕೋರ್ ಸಬ್ಜೆಕ್ಟ್‌ಗಳಿಗೆ ಈ ನಿಯಮ ಅನ್ವಯ ಆಗಲಿದೆ.

ಇಲ್ಲಿಯವರೆಗೂ ವಿಜ್ಞಾನ, ಗಣಿತ, ರಸಾಯನಶಾಸ, ಭೌತಶಾಸ, ಜೀವಶಾಸ್ತ್ರ ಸೇರಿ ಇತರೆ 37 ವಿಷಯಗಳಿಗೆ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ಮತ್ತು 70 ಅಂಕಗಳಿಗೆ ಥಿಯೆರಿ ಪರೀಕ್ಷೆ ನಡೆಸಿ 100 ಅಂಕಗಳನ್ನು ಪರಿಗಣಿಸಲಾಗುತ್ತಿತ್ತು. ಪ್ರಾಯೋಗಿಕ ಪರೀಕ್ಷೆ ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗದ ವಿಷಯಗಳಿಗೆ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು 2023-24ನೇ ಸಾಲಿನಿಂದ 20 ಆಂತರಿಕ ಮತ್ತು 80 ಥಿಯರಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಒಂದು ವೇಳೆ ವಿದ್ಯಾರ್ಥಿಯು ಕಿರು ಪರೀಕ್ಷೆ ಮತ್ತು ಮಧ್ಯವಾರ್ಷಿಕ ಪರೀಕ್ಷೆಗೆ ಗೈರು ಹಾಜರಾಗಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ 80 ಅಂಕಗಳಿಗೆ ಕನಿಷ್ಠ ಉತ್ತೀರ್ಣಗೊಳ್ಳಲು ಬೇಕಾದ 35 ಅಂಕಗಳನ್ನು ಪಡೆಯಬೇಕು. ಇದು ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಹೊಸ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳ ನಿರಂತರ ಕಲಿಕೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ ಮತ್ತು ಅವರ ಕಾರ್ಯಯೋಜನೆಯ ಆಧಾರದ ಮೇಲೆ 10 ಅಂಕಗಳನ್ನು ನೀಡಲಾಗುತ್ತದೆ. “ಇದು ವಿದ್ಯಾರ್ಥಿಗಳಿಗೆ ಸ್ವಲ್ಪ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಾಯೋಗಿಕ ವಿಷಯಗಳಲ್ಲಿ ಅವರ ಆಸಕ್ತಿಯು ಹೆಚ್ಚಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

 

ಇದನ್ನು ಓದಿ: AI News Reader: ಪವರ್ ಟಿವಿಗೆ ಬಂದ ಸೂಪರ್ ಫಿಗರು ! ನಮಸ್ಕಾರ ಕನ್ನಡಿಗರೇ ಅಂದ ನಿರೂಪಕಿ ಇಂಡಿಯನ್ನೇ ಅಲ್ಲ, ಹಾಗಾದ್ರೆ ಎಲ್ಯೊಳು ?