Home News AHF Recruitment: ಪಶು ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ – 400 ವೈದ್ಯರು ಸೇರಿ...

AHF Recruitment: ಪಶು ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ – 400 ವೈದ್ಯರು ಸೇರಿ 200 ನಿರೀಕ್ಷಕರ ನೇಮಕಕ್ಕೆ ಸದ್ಯದಲ್ಲೇ ಆದೇಶ

AHF Recruitment

Hindu neighbor gifts plot of land

Hindu neighbour gifts land to Muslim journalist

AHF Recruitment: ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ (AHF Recruitment) ನೇಮಕಾತಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಕೆಲವೇ ತಿಂಗಳಲ್ಲಿ 200 ಪಶು ವೈದ್ಯಕೀಯ ನಿರೀಕ್ಷಕರು, ವರ್ಷಾಂತ್ಯದ ವೇಳೆಗೆ 400 ಪಶು ವೈದ್ಯರ ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ವಿಧಾನಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಗುರುರಾಜ ಶೆಟ್ಟಿ ಗಂಟಿಹೊಳಿ ಅವರ ಪ್ರಶ್ನೆಗೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಉತ್ತರ ನೀಡಿದ್ದು,
ಪಶು ಸಂಗೋಪನಾ ಇಲಾಖೆಯಲ್ಲಿ ಪಶು ವೈದ್ಯರು, ಪಶು ವೈದ್ಯಕೀಯ ನಿರೀಕ್ಷಕರ ಕೊರತೆ ಇದೆ. ಇದನ್ನು ಸರಿಪಡಿಸಲು ಡಿಸೆಂಬರ್ ತಿಂಗಳಿನಲ್ಲಿ ಪಶು ವೈದ್ಯಕೀಯ ನಿರೀಕ್ಷಕರು ಮತ್ತು ವೇಳೆಗೆ 400 ಪಶುಗಳನ್ನು ನೇಮಕ ಮಾಡುವಂತೆ ಆದೇಶ ನೀಡಲಾಗಿದೆ.

ಅದಲ್ಲದೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿರುವ ಹೊಸ ವೈದ್ಯರು ಮತ್ತು ಪಶು ವೈದ್ಯಕೀಯ ನಿರೀಕ್ಷಕರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. 30 ಪಶು ವೈದ್ಯಕೀಯ ಆಸ್ಪತ್ರೆಗಳ ಮಂಜೂರಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಹೊಸ ಆಸ್ಪತ್ರೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಇದನ್ನು ಓದಿ: Women Death: ಮದುವೆಯಾದ ಕೆಲವೇ ದಿನಗಳಲ್ಲಿ ನವವಿವಾಹಿತೆ ಮೃತ್ಯು ; ಕಾರಣ ಕೇಳಿದ್ರೆ ನೀವೂ ಮರುಗುತ್ತೀರಾ!