# Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ ! ಇದೇ ದಿನಾಂಕದಿಂದ ಜಾರಿ

- Link: https://hosakannada.com/news/latest-news-nandini-milk-price-hike-nandini-milk-price-is-rs-3-increase/
- Published: 2023-07-22T09:57:33+00:00
- Author: Mallika

Nandini Milk price hike: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ನಂದಿನಿ ಹಾಲಿನ 
ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ (Nandini Milk price hike) ಮಾಡುವ ರಾಜ್ಯ ಸರ್ಕಾರಕ್ಕೆ
ಪ್ರಸ್ತಾವ ಸಲ್ಲಿಸಿತ್ತು. ಇದೀಗ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದ್ದೂ, ಈ ಹೊಸ ದರವು
ಆಗಸ್ಟ್‌ 1 ರಿಂದ ಜಾರಿಗೆ ಬರಲಿದೆ.

Sponsored

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ(CM Siddaramaiah) ನೇತೃತ್ವದಲ್ಲಿ
ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ (KMF) ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ
ತೆಗೆದುಕೊಳ್ಳಲಾಗಿದೆ. KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ
ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ.

Advertisement

Advertisement

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ (H D Revanna) , 5 ರೂ. ದರ ಏರಿಕೆಗೆ 
ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ
ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ.

Advertisement
