Home News Lava Blaze 5G: ವಿದೇಶಿ ಮೊಬೈಲ್ ಕಂಪನಿಗಳಿಗೆ ನಡುಕ ಹುಟ್ಟಿಸಿತು ಭಾರತದ ಲಾವಾ ಬ್ಲೇಜ್ !

Lava Blaze 5G: ವಿದೇಶಿ ಮೊಬೈಲ್ ಕಂಪನಿಗಳಿಗೆ ನಡುಕ ಹುಟ್ಟಿಸಿತು ಭಾರತದ ಲಾವಾ ಬ್ಲೇಜ್ !

Hindu neighbor gifts plot of land

Hindu neighbour gifts land to Muslim journalist

ಸ್ಮಾರ್ಟ್ ಫೋನ್ ಸ್ಪರ್ಧೆ 2023ರ ಮೊದಲ ತಿಂಗಳೇ ಪ್ರಾರಂಭ ಆದಂತಿದೆ. ಸದ್ಯ ಸ್ಮಾರ್ಟ್ ಫೋನ್ ಇತ್ತೀಚಿಗೆ ಒಂದಲ್ಲಾ ಎರಡಲ್ಲ ಸಾವಿರಾರು ಆಯ್ಕೆಗಳಲ್ಲಿ ಇವೆ. ಸದ್ಯ ಯಾವುದು ಬೆಸ್ಟ್ ಅನ್ನೋದು ನೋಡಿ ಸೆಲೆಕ್ಟ್ ಮಾಡೋದು ಮಾತ್ರ ನಮ್ಮ ಕೆಲಸ ಅಷ್ಟೇ.

ಸದ್ಯ ಭಾರತದ ಪ್ರಸಿದ್ಧ ಲಾವಾ ಕಂಪನಿ ಕಳೆದ ವರ್ಷ ನವೆಂಬರ್​ನಲ್ಲಿ ದೇಶದಲ್ಲಿ ಅತೀ ಕಡಿಮೆ ಬೆಲೆಗೆ ಆಕರ್ಷಕ 5ಜಿ ಫೋನನ್ನು ಪರಿಚಿಯಿಸಿತ್ತು. ಇದರ ಹೆಸರು ಲಾವಾ ಬ್ಲೆಜ್‌ 5ಜಿ (Lava Blaze 5G). ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಪರಿಚಯಿಸಿತ್ತು . ಈ ಸ್ಮಾರ್ಟ್​ಫೋನ್ ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿದೆ.

ಇನ್ನು ಭಾರತದಲ್ಲಿ ಜಿಯೋ ಮತ್ತು ಏರ್‌ಟೆಲ್ ಕಂಪನಿಗಳು ನಿಗದಿತ ನಗರಗಳಲ್ಲಿ 5ಜಿ ಸೇವೆಯನ್ನು ಒದಗಿಸಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ 5G ಅಳವಡಿಸಿಕೊಳ್ಳಲು ಉತ್ಸುಕರಾಗಿರುವ ಪ್ರವೇಶ ಮಟ್ಟದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ಸ್ಮಾರ್ಟ್ಫೋನ್ ಅನ್ನು ದೇಶಿ ಕಂಪನಿಯಾಗಿರುವ ಲಾವಾ ಅಭಿವೃದ್ಧಿಪಡಿಸಿದೆ.

ಸದ್ಯ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಈಗ ಎರಡು ಮಾದರಿಯಲ್ಲಿ ಖರೀದಿಗೆ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಮಾದರಿಗೆ 9,999ರೂ. ಬೆಲೆ ಇದೆ. ಮತ್ತು ಪ್ರಸ್ತುತ ಹೊಸದಾಗಿ ಬಿಡುಗಡೆ ಆಗಿರುವ ಫೋನ್ 6GB RAM + 128GB ಸ್ಟೋರೇಜ್ ಸಾಮರ್ಥ್ಯಕ್ಕೆ 11,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಫೆಬ್ರವರಿ 15 ರಿಂದ ಲಭ್ಯವಿದೆ.

ಈ ಫೋನಿನ ಫೀಚರ್ಸ್ :

  • ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ.
  • ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ.
    7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ.
  • ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  • ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಈ ಮೇಲಿನ ಫೀಚರ್ಸ್ ವಿಶೇಷತೆಗಳನ್ನು ಒಳಗೊಂಡ ಲಾವಾ ಬ್ಲೆಜ್‌ 5ಜಿ ಫೋನ್ ಅನ್ನು ಅತೀ ಕಡಿಮೆ ಬೆಲೆಗೆ ಕೊಂಡುಕೊಳ್ಳಬಹುದಾಗಿದೆ.