Home News Bhovi Corporation: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ!

Bhovi Corporation: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ!

Hindu neighbor gifts plot of land

Hindu neighbour gifts land to Muslim journalist

Bhovi Corporation: ಎಸ್‌ಐಟಿ ಅಧಿಕಾರಿಗಳು ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಕುರಿತಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು (DYSP Kanakalakshmi) ಬಂಧನ ಮಾಡಲಾಗಿದೆ.

ವಕೀಲೆ ಜೀವಾ ಅವರು ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು ಸುದೀರ್ಘ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಇಂದು ಬೆಳಗ್ಗೆ ಹಾಜರಾಗಿದ್ದಾಗ ಬಂಧನ ಮಾಡಲಾಗಿದೆ.

ಏನಿದು ಪ್ರಕರಣ?

ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿದಾಗ, ಕಿರುಕುಳದ ಆರೋಪ ಮಾಡಿ ಜೀವಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. 34 ಕೋಟಿ ರೂ ಭೋವಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೈಸಸ್‌ಗೆ 7.16 ಕೋಟಿ ರೂ., ಸಹೋದರಿ ಹೆಸರಿನಲ್ಲಿ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಉಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿರುವ ಕುರಿತು ವರದಿಯಾಗಿದೆ.

ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ, ʼ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆʼ ಎಂದು ಆರೋಪ ಮಾಡಿದ್ದರು. ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲು ಮಾಡಿ ತನಿಖೆ ಶುರು ಮಾಡಿತ್ತು.