Home Interesting ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆಯ ಕಾಟದಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ

ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆಯ ಕಾಟದಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ

Hindu neighbor gifts plot of land

Hindu neighbour gifts land to Muslim journalist

ಬೆಳಗಾವಿ: ಚಿರತೆಯ ಕಾಟದಿಂದಾಗಿ ಇಲ್ಲಿನ 22 ಶಾಲೆಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ, ಸಹ್ಯಾದ್ರಿ ನಗರ, ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ ಹಾಗೂ ವಿಜಯನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಆಗಸ್ಟ್ 5ರ ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು. ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿತ್ತು. ಮೂರು ದಿನಗಳು ಕಳೆದರೂ ಅದು ಪತ್ತೆಯಾಗಲಿಲ್ಲ. ಗಾಲ್ಫ್ ಮೈದಾನದಲ್ಲಿ ಚಿರತೆ ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ರಕ್ಷಣಾ ಇಲಾಖೆಗೆ ಸೇರಿದ 250 ಎಕರೆ ಪ್ರದೇಶದಲ್ಲಿ ಚಿರತೆ ಇರುವ ಶಂಕೆ ಇದ್ದು, 50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಚಿರತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಚಿರತೆಯನ್ನು ಹಿಡಿಯುವುದಕ್ಕಾಗಿ 7 ಬೋನು ಇರಿಸಿ, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.