ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಲಯನ್ಸ್ ಪ್ರೌಢ ಶಾಲೆ ದ್ವಿತೀಯ ಸ್ಥಾನ
ಗೋಣಿಕೊಪ್ಪ: ಕಾಲ್ಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಿನಲ್ ಮಾಚಯ್ಯ ಎ.ಟಿ. ಹಾಗೂ ಆರಾಧ್ಯ ಎಂ.ಎಂ. ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
Sponsoredಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಿನಲ್ ಮಾಚಯ್ಯ ಎ.ಟಿ. ಮತ್ತು ಆರಾಧ್ಯ ಎಂ.ಎಂ. ಅವರು ತಮ್ಮ ಜ್ಞಾನ, ಸಮಯಪ್ರಜ್ಞೆ ಹಾಗೂ ಆತ್ಮವಿಶ್ವಾಸವನ್ನು ಪ್ರದರ್ಶಿಸಿ ದ್ವಿತೀಯ ಸ್ಥಾನ ಗಳಿಸಿದರು.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ , ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮುಂದಿನ ದಿನಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.




