Home News liquor price: ಮದ್ಯ ಪ್ರಿಯರಿಗೆ ಸಿಹಿ ಸುದ್ದಿ! ನಾಳೆಯಿಂದ ಮದ್ಯದ ದರ ಕಡಿಮೆಯಾಗಲಿದೆ: ಸರ್ಕಾರದ ಆದೇಶ

liquor price: ಮದ್ಯ ಪ್ರಿಯರಿಗೆ ಸಿಹಿ ಸುದ್ದಿ! ನಾಳೆಯಿಂದ ಮದ್ಯದ ದರ ಕಡಿಮೆಯಾಗಲಿದೆ: ಸರ್ಕಾರದ ಆದೇಶ

liquor price

Hindu neighbor gifts plot of land

Hindu neighbour gifts land to Muslim journalist

liquor price: ಕರ್ನಾಟಕದಲ್ಲಿ ಮದ್ಯಪ್ರಿಯರಿಗೆ ಗುಡ್​ನ್ಯೂಸ್​ ಒಂದು ಇದೆ. ಮುಖ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಮದ್ಯಪ್ರಿಯರಿಗೆ ಹಬ್ಬದ ಸಮಯದಲ್ಲಿ ಇದೊಂದು ಶುಭ ಸುದ್ದಿ ಆಗಿದೆ.

ಹೌದು, ಭಾರತದಲ್ಲಿ ತಯಾರಿಸಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು (liquor price) ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಆಗಸ್ಟ್ 27ರಿಂದಲೇ ಜಾರಿಗೆ ಬರಲಿದೆ.

ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್ ಗಳ ಮದ್ಯಕ್ಕೆ ಭಾರಿ ಕೊರತೆ ಉಂಟಾಗಿತ್ತು. ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್ ಗಳ ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್ ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲ್ಯಾಬ್ ಗಳಲ್ಲಿನ ವಿಸ್ಕಿ, ರಮ್, ಬ್ರಾಂಡಿಗಳ ಬೆಲೆ ಸಹಜವಾಗಿಯೇ ಕಡಿಮೆಯಾಗಲಿದೆ.