Home News HD Kumaraswamy: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ADGP ಚಂದ್ರಶೇಖ‌ರ್, ಬೆದರಿಕೆ ಹಿನ್ನೆಲೆ

HD Kumaraswamy: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ADGP ಚಂದ್ರಶೇಖ‌ರ್, ಬೆದರಿಕೆ ಹಿನ್ನೆಲೆ

H D Kumaraswamy
Image source- The new Indian Express

Hindu neighbor gifts plot of land

Hindu neighbour gifts land to Muslim journalist

HD Kumaraswamy: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಹಾಗೂ ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರು ದೂರು ದಾಖಲಿಸಿದ್ದಾರೆ.

ಹೆಚ್ಛಡಿ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಜತೆಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ ಅವರು ಆರೋಪಿಸಿದ್ದಾರೆ. ಜತೆಗೆ ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ, ನನ್ನ ವಿರುದ್ಧ ಸುಳ್ಳು- ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿಯವರ ಆಪ್ತ ಸುರೇಶ್ ಬಾಬು ಕೂಡಾ ನನ್ನ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದು, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿದ್ದಾರೆ. ಚಂದ್ರಶೇಖ‌ರ್ ರವರ ದೂರನ್ನು ಸ್ವೀಕರಿಸಿರುವ ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.