Home News Lokayukta Raid: ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ: ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್ ‌

Lokayukta Raid: ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ: ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್ ‌

Hindu neighbor gifts plot of land

Hindu neighbour gifts land to Muslim journalist

Lokayukta Raids: ಕರ್ನಾಟಕದಲ್ಲಿ ಇಂದು ಮೇ 31 ರಂದು ಲೋಕಾಯುಕ್ತ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದೆ. ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ

ಉಡುಪಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್‌ ಆಫೀಸರ್‌ ಗಿರೀಶ್‌ ರಾವ್‌ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್‌ಪಿ ಮಂಜಿನಾಥ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿ ಐದು ಕಡೆ ದಾಳಿ ನಡೆದಿದೆ.

ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್‌ ಎಚ್‌ ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್‌ ಮೇಲೆ ದಾಳಿಯಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಬಾಗಲಕೋಟೆ ಡಿಸಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್‌ ತತ್ರಾಣಿಗೂ ಲೋಕಾಯುಕ್ತ ಶಾಕ್‌ ನೀಡಿದೆ. ಬಳ್ಳಾರಿ ಪಿಡಬ್ಲೂಡಿ ಸುಪರಿಂಟೆಂಡೆಂಟ್‌ ಇಂಜಿನಿಯರ್‌ ಅಮೀನ್‌ ಮುಕ್ತಾರ್‌ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ.