Advertisement
Advertisement
ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಸರಕಾರ ರಚಿಸಲು ಕನಿಷ್ಠ 148 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ ಈಗಾಗಲೇ 184 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಹುಮತದ ಗಡಿಯನ್ನು ದಾಟಿದೆ.
Sponsoredಪಶ್ಚಿಮ ಬಂಗಾಳದಲ್ಲಿ ಅಧಿಕಾರಿ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಈ ಭಾರೀ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಟಿಎಂಸಿಯ ಹಲವು ಪ್ರಮುಖ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆ ಕಂಡಿದ್ದಾರೆ.
ಮಧ್ಯಾಹ್ನದ ವೇಳೆಗೆ ಸಂಪೂರ್ಣ ಹಾಗೂ ಅಧಿಕೃತ ಚಿತ್ರಣ ಹೊರಬೀಳಲಿದ್ದು, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಹೊಸ ರಾಜಕೀಯ ಇತಿಹಾಸ ಸೃಷ್ಟಿಯಾಗಲಿದೆ ಎನ್ನುವ ಲಕ್ಷಣ ಕಾಣುತ್ತಿದೆ.