ಸೋಮವಾರ, 26 ಅಕ್ಟೋಬರ್ 2026
Trending

Chikkamaglur : ಅನ್ಯಕೋಮಿನ SSLC ಹುಡುಗ, ಹಿಂದೂ ಧರ್ಮದ PU ಹುಡುಗಿ ನಡುವೆ ಪ್ರೇಮ – ಕಾಫಿನಾಡಲ್ಲಿ ಲವ್ ಜಿಹಾದ್?

Chikkamaglur : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದ್ದು, ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು-ಪ್ರತಿದೂರುಗಳು ಆಗಿವೆ. 

Sponsored

ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೇ ನಿವಾಸಿಗಳಾದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿಂದೂ ಮುದಾಯದ ಹುಡುಗಿ ಮತ್ತು ಎಸ್ ಎಸ್ ಎಲ್ ಸಿ ಓದುತ್ತಿರುವ ಮುಸ್ಲಿಂ ಸಮುದಾಯದ ಹುಡುಗ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. 

ಈ ವಿಚಾರ ಹೊರಬಿದ್ದ ನಂತರ, ‘ಲವ್ ಜಿಹಾದ್’ ಆರೋಪದಡಿ ಕೆಲವು ಹಿಂದೂ ಸಂಘಟನೆ ಕಾರ್ಯಕರ್ತರು ಅಪ್ರಾಪ್ತ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಹಲ್ಲೆಗೆ ಒಳಗಾದ ಅಪ್ರಾಪ್ತ ಯುವಕ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಇನ್ನೊಂದೆಡೆ, ಹುಡುಗಿಯ ತಂದೆಯೂ ಕೂಡ ಅಪ್ರಾಪ್ತ ಮುಸ್ಲಿಂ ಯುವಕನ ವಿರುದ್ಧ ದೂರು ನೀಡಿದ್ದು, ಅದರ ಆಧಾರದಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

ಸದ್ಯ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾ ವಹಿಸಿದ್ದಾರೆ.