ಶನಿವಾರ, 24 ಅಕ್ಟೋಬರ್ 2026

ಮದ್ದೂರಿನ ಗಾರ್ಮೆಂಟ್ಸ್‌ಗೆ ಬೆಂಕಿ: ಯಂತ್ರೋಪಕರಣ, ಬಟ್ಟೆ ಸುಟ್ಟು ಭಾರೀ ನಷ್ಟ

ಮಂಡ್ಯ: ಮದ್ದೂರು ಪಟ್ಟಣದ ಖಾಸಗಿ ಗಾರ್ಮೆಂಟ್ಸ್ ಘಟಕದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಿಂದ ಭಾರೀ ನಷ್ಟ ಉಂಟಾಗಿದೆ. ಫ್ಯಾಕ್ಟರಿಯಲ್ಲಿದ್ದ ದುಬಾರಿ ಯಂತ್ರೋಪಕರಣಗಳು, ಬಟ್ಟೆಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ಸೋಮನಹಳ್ಳಿಯಿಂದ ಇತ್ತೀಚೆಗೆ ಮದ್ದೂರು ನಗರಕ್ಕೆ ಸ್ಥಳಾಂತರಗೊಂಡಿದ್ದ ಈ ಘಟಕದಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಬೆಳಗ್ಗೆ ಕೆಲಸಕ್ಕೆ ಬಂದ ಸಿಬ್ಬಂದಿ ಫ್ಯಾಕ್ಟರಿಯೊಳಗಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿ ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ನಂತರ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು, ಮೂರುಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ.

ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಬೆಂಕಿ ಸುತ್ತಮುತ್ತಲಿನ ಕಟ್ಟಡಗಳಿಗೆ ವ್ಯಾಪಿಸುವುದು ತಪ್ಪಿದೆ. ಆದರೆ ಫ್ಯಾಕ್ಟರಿಯೊಳಗಿದ್ದ ಸಿದ್ಧ ಉಡುಪುಗಳು, ಕಚ್ಚಾ ಸಾಮಗ್ರಿಗಳು ಹಾಗೂ ಯಂತ್ರೋಪಕರಣಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ.

ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯಿಂದ ಉಂಟಾದ ನಷ್ಟದ ಪ್ರಮಾಣವನ್ನು ಅಂದಾಜಿಸಲಾಗುತ್ತಿದೆ.

ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ