Home Interesting ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ: 34 ದಿನಗಳಲ್ಲಿ ₹2 ಕೋಟಿ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ: 34 ದಿನಗಳಲ್ಲಿ ₹2 ಕೋಟಿ ಸಂಗ್ರಹ

Hindu neighbor gifts plot of land

Hindu neighbour gifts land to Muslim journalist

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಕೋಟಿ ಕೋಟಿ ಹಣ ಹರಿದುಬಂದಿದ್ದು,  34 ದಿನಗಳಲ್ಲಿ ಬರೊಬ್ಬರಿ ₹2 ಕೋಟಿ ಸಂಗ್ರಹವಾಗಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,  ನ. 3, 2022ರಿಂದ ಡಿ. 6,2022ರವರೆಗೆ ಒಟ್ಟು 34 ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಾಲಯದಲ್ಲಿ 2 ಕೋಟಿ 59 ಲಕ್ಷ ರೂಪಾಯಿ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್‌ ಬಂದೋಬಸ್ತ್‌ನಲ್ಲಿ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೂ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ