Home latest ಬಸ್ಸಿನಲ್ಲಿ ಯುವತಿ ಎದುರೇ ಹಸ್ತಮೈಥುನ ಮಾಡಿದ ವ್ಯಕ್ತಿ | ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಕ್ತಿ...

ಬಸ್ಸಿನಲ್ಲಿ ಯುವತಿ ಎದುರೇ ಹಸ್ತಮೈಥುನ ಮಾಡಿದ ವ್ಯಕ್ತಿ | ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಕ್ತಿ ಅಳುತ್ತಾ ಹೇಳಿದ್ದೇನು?

Hindu neighbor gifts plot of land

Hindu neighbour gifts land to Muslim journalist

ಹೊಸ ವರ್ಷದ ಸಂಭ್ರಮದಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆ ನಡೆದಿತ್ತು. ಇದಕ್ಕೆ ಕಾರಣ ಬೆತ್ತಲೆ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಸ್ಕೂಟಿ ಚಲಾಯಿಸುತ್ತಿದ್ದ ಯುವತಿಯನ್ನು ಗುದ್ದಿ ಆಕೆಯ ಕಾಲು ಕಾರಿಗೆ ಸಿಲುಕಿದ ಕಾರಣ ಯುವತಿಯನ್ನು ಹಲವು ಕಿಲೋಮೀಟರ್‌ಗಳವರೆಗೆ ಎಳೆದೊಯ್ಯದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ,

ದೆಹಲಿಯ ಸಾರ್ವಜನಿಕ ಬಸ್‌ನಲ್ಲಿ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಬಸ್‌ನಲ್ಲಿ ವ್ಯಕ್ತಿಯೊಬ್ಬ ಯುವತಿ ಎದುರು ತನ್ನ ಖಾಸಗಿ ಅಂಗವನ್ನು ತೋರಿಸಿ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ದೆಹಲಿ ಸಾರಿಗೆ ಸೇವೆ (DTC) ಮಾರ್ಷಲ್ ಈ ಬಗ್ಗೆ ಆರೋಪಿಸಿದೆ. ಆದರೆ ಇನ್ನೂ ಈ ಬಗ್ಗೆ ದೂರು ದಾಖಲಾಗದ ಕಾರಣ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಂಗಳವಾರ ಡಿಟಿಸಿ ಬಸ್‌ನಲ್ಲಿ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದರಿಂದ ಭಯಭೀತಳಾದ ಯುವತಿ ಈ ಬಗ್ಗೆ ಇತರರಿಗೆ ಹೇಳಿದಾಗ, ಬಸ್‌ನಲ್ಲಿದ್ದ ಮಾರ್ಷಲ್ ಸಂದೀಪ್ ಎಂಬುವವರು ಪ್ರಶ್ನೆ ಮಾಡಿದ್ದಾರೆ. ಇನ್ನು, ಈ ಘಟನೆಯಲ್ಲಿ ಸಿಕ್ಕಿಬಿದ್ದ ನಂತರ ಆರೋಪಿ ಅಳುತ್ತಿರುವ ವಿಡಿಯೋ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಆರೋಪಿ ಬಿಹಾರದ ನಿವಾಸಿಯಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಆದರೆ ಇನ್ನೂ ಯಾವುದೇ ದೂರು ದಾಖಲಾಗದ ಕಾರಣ ಆತನನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಧ್ಯೆ, ಈ ಘಟನೆ ಬಗ್ಗೆ ದೂರು ನೀಡಲು ಅಥವಾ ಹೇಳಿಕೆ ದಾಖಲಿಸಲು ಪೊಲೀಸರು ಸಂತ್ರಸ್ಥೆ ಮಹಿಳೆಯನ್ನು ಸಂಪರ್ಕಿಸಿದ್ದು, ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.